ತುಮಕೂರು- ವಿಕಲಚೇತನ ಮತ್ತು ಬುದ್ಧಿಮಾಂಧ್ಯ ಮಕ್ಕಳನ್ನು ಮನೆಯಿಂದ ಹೊರಗೆ ಬಾರದಂತೆ ಬಂಧಿಸಿ ಕೂಡಿ ಹಾಕುವುದು ಅಪರಾಧ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸ ತಿಳಿಸಿದರು.
ನಗರದ ಬಾಲಭವನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತುಮಕೂರು, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತುಮಕೂರು, ಮೊಬಿಲಿಟಿ ಇಂಡಿಯಾ, ತುಮಕೂರು, ವಿಕಲಚೇತನ ಮಕ್ಕಳೊಂದಿಗೆ ಕಾರ್ಯನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಶೇಷ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಕಲಚೇತನ ಮಕ್ಕಳು ಹಾಗೂ ಆರೈಕೆದಾರರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನಿಷ್ಠ ಪದ್ಧತಿಗಳ ಸಂಕೋಲೆಯಿAದ ವಿಕಲಚೇತನ ಮಕ್ಕಳನ್ನು ಕಟ್ಟಿ ಹಾಕುವುದು, ಕೂಡಿ ಹಾಕಬಾರದು. ಇಂತಹ ಪದ್ಧತಿಗಳು ಕಂಡು ಬಂದರೆ ಅಂತಹವರಿಗೆ ಕಾನೂನಿನಲ್ಲಿ ದಂಡನೆ ಮತ್ತು ಶಿಕ್ಷೆ ವಿಧಿಸಲು ಅವಕಾಶ ಇದೆ. ಇದು ಕಾನೂನು ಪ್ರಕಾರ ಅಪರಾಧ,ಇಂತಹ ಕಾರ್ಯಕ್ಕೆ ಯಾರೂ ಸಹ ಕೈ ಹಾಕಬಾರದು. ಬದಲಾಗಿ ವಿಕಲಚೇತನ ಮಕ್ಕಳ ಆರೈಕೆಗಾಗಿ ಇರುವ ಡೇ ಕೇರ್ ಸೆಂಟರ್ ಮತ್ತು ವಸತಿ ಶಾಲೆಗಳಿಗೆ ಸೇರಿಸಲು ಪೋಷಕರು ಹೆಚ್ಚು ಜಾಗೃತರಾಗಬೇಕು ಎಂದು ಹೇಳಿದರು.
ಗರ್ಭವಾಸ್ಥೆಯಲ್ಲೇ ಮಗುವಿನ ಸ್ಥಿತಿಯನ್ನು ಕಂಡು ಹಿಡಿಯುವಷ್ಟು ತಂತ್ರಜ್ಞಾನ ಮುಂದುವರೆದಿದ್ದರೂ ಸಹ ವಿಕಲಚೇತನ ಮಕ್ಕಳು ಜನಿಸುವುದು ಕಂಡು ಹಿಡಿಯುವುದು ಕಷ್ಟಕರವಾಗುತ್ತಿದೆ. ವಿಕಲಚೇತನ ಮಕ್ಕಳನ್ನು ಜೀವನಪೂರ್ತಿ ಆರೈಕೆ ಮಾಡುವ ಪೋಷಕರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ. ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯದಲ್ಲಿ ವಿಕಲಚೇತನ ಮಕ್ಕಳಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ದೊರಕಿಸುವ ಸಂಬAಧ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳಲ್ಲಿ ವಿಕಲಚೇತನ ಮಕ್ಕಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ಮಾತನಾಡಿ, ವಿಕಲಚೇತನ ಮಕ್ಕಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪೋಷಕರು ಪಡೆದುಕೊಳ್ಳಬೇಕು. ಯುಡಿಐಡಿ ಕಾರ್ಡ್ ಇದ್ದರೆ ಓದುವುದು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆಯೂ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕರಾದ ಆನಂದ್ ಎಸ್.ಎನ್., ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಬಿ.ಎಸ್.ಚಿದಾನಂದಮೂರ್ತಿ, ಸಬ್ಇನ್ಸ್ಪೆಕ್ಟರ್ ಬಾಬು ಕಿಲಾರಿ, ಹೆಲನ್ ಕೆಲರ್ ನಿರ್ದೇಶಕರಾದ ಎಂ.ಎಸ್.ಗಾಯತ್ರಿ, ಡಾ.ಹಿರೇಮಠ್,ಚೈತನ್ಯ, ಸಂಗಮೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
