ತುಮಕೂರು: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು 23 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನಗರದ ಬಿಜಿಎಸ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ, ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಬಿಜ್ಯೋತಿಗಣೇಶ್, ರಾಜ್ಯಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಪದವೀಧರ ಮತದಾರರು ಈ ಚುನಾವಣೆ ಫಲಿತಾಂಶದಲ್ಲಿ ಉತ್ತರ ನೀಡಿದ್ದಾರೆ. ಎಲ್ಲಾ ನಾಲ್ಕು ವಿಧಾನ ಪರಿಷತ್ ಚುನಾವಣೆಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.ಈ ಫಲಿತಾಂಶ 28 ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಉತ್ತಮ ಆಡಳಿತ, ಬಿ.ಎಸ್.ಯೆಡೆಯೂರಪ್ಪ, ಬಿ.ವೈ. ವಿಜಯೇಂದ್ರ, ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ಕುಮಾರಸ್ವಾಮಿ ಅವರ ಮಾರ್ಗದರ್ಶನದಂತೆ ಬಿಜೆಪಿ ಹಾಗೂ ಜೆಡಿಎಸ್ನ ಮುಖಂಡರು,ಕಾರ್ಯಕರ್ತರು ಈ ಚುನಾವಣೆಯಲ್ಲಿ ಒಗ್ಗಟ್ಟಾಗಿ ಶ್ರಮಿಸಿದರು.ಮುಂಬರುವ ಚುನಾವಣೆಗಳಲ್ಲೂ ಎರಡೂ ಪಕ್ಷಗಳು ಇದೇ ರೀತಿ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷರವಿಶಂಕರ್ ಹೆಬ್ಬಾಕ ಮಾತನಾಡಿ, ಎನ್ಡಿಎಅಭ್ಯರ್ಥಿ ಕೆ.ಎಂ.ಸುರೇಶ್ ಅವರುದಾಖಲೆಯ ಮತಗಳ ಅಂತರದಿAದ ಗೆಲುವು ಪಡೆಯಲುಎರಡೂ ಪಕ್ಷಗಳು ಮುಖಂಡರು, ಕಾರ್ಯಕರ್ತರು ಕಾಳಜಿಯಿಂದ ಕೆಲಸ ಮಾಡಿದ್ದಾರೆ.ಕಳೆದ ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿ ಎರಡು ಪಕ್ಷಗಳು ಒಟ್ಟಾಗಿ ಕೆಲಸ ಮಾಡಿದ ಪರಿಣಾಮ ವಿ.ಸೋಮಣ್ಣ ಅವರು ಜಯಗಳಿಸಿದರು, ಪದವಿಧರ ಮತದಾರರು ಯಾವುದೇ ಆಮಿಷಕ್ಕೆ, ಒತ್ತಡಕ್ಕೆ ಬಲಿಯಾಗದೆ ಮೈತ್ರಿ ಅಭ್ಯರ್ಥಿ ಕೆ.ಎಂ.ಸುರೇಶ್ ರವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ.ಈ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಬೇಸತ್ತಿರುವ ರಾಜ್ಯದ ಜನ ಈ ಸರ್ಕಾರವನ್ನು ಕಿತ್ತೊಗೆಯಲು ಚುನಾವಣೆಯನ್ನು ಕಾಯುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜ್, ಟಿ.ಹೆಚ್. ಜಯರಾಮ್ ಬ್ಯಾಟರಂಗೇಗೌಡ, ಟಿ.ಎಲ್.ಕುಂಭಯ್ಯ, ನಗರಕಾರ್ಯಾಧ್ಯಕ್ಷ ಟಿ.ಎಸ್.ಮೋಹನ್ಕುಮಾರ್, ಟಿ.ಹೆಚ್. ಹನುಮಂತರಾಜು, ರಾಜಶೇಖರ್, ಉಪಾಧ್ಯಕ್ಷ ಹೆಚ್.ಎಂ. ರವೀಶಯ್ಯ, ಚೈತ್ರಮಂಜುನಾಥ್, ಧನುಷ್, ಹೆಚ್.ಎಸ್. ವಿರೂಪಾಕ್ಷಪ್ಪ, ಕೆಂಪರಾಜು, ಸೇರಿದಂತೆ ವಿವಿಧ ಮೋರ್ಚಾ, ಘಟಕಗಳ ಮುಖಂಡರು ಭಾಗವಹಿಸಿದ್ದರು.
ವರದಿ : ಕೆ ಬಿ ಚಂದ್ರಚೂಡ್
