ತುಮಕೂರು: ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ಮತ್ತು ಕಾರ್ಯಾಚರಣೆ ಸಮಿತಿಯ ತುಮಕೂರು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದ ಪೂರ್ವಭಾವಿ ಸಭೆಯು ನಗರದಲ್ಲಿ ಯಶಸ್ವಿಯಾಗಿ ಜರುಗಿತು.
ಸಭೆಯ ನೇತೃತ್ವ ವಹಿಸಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ್ ಅವರು, ಮುಂಬರುವ ಜುಲೈ ತಿಂಗಳಿನಲ್ಲಿ ಜಿಲ್ಲಾ ಘಟಕದ ಭವ್ಯ ಉದ್ಘಾಟನಾ ಸಮಾರಂಭ ಆಯೋಜಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖ ಸರ್ಕಾರಿ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಲಿದ್ದು, ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಸಿದ್ಧತೆ ಹಾಗೂ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ತುಮಕೂರು ಜಿಲ್ಲಾ ಅಧ್ಯಕ್ಷರಾದ ಬಸವರಾಜ ಐನಾಪುರ ಅವರಿಗೆ ಸೂಚನೆ ನೀಡಿದರು.
ಈ ಪ್ರಮುಖ ಸಭೆಯಲ್ಲಿ ಸಮಿತಿಯ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಟಿ. ಶ್ರೀನಿವಾಸಮೂರ್ತಿ, ತುಮಕೂರು ತಾಲ್ಲೂಕು ಅಧ್ಯಕ್ಷರಾದ ಡಾ.ಎ.ಬಿ.ಎಂ.ಹಿರೇಮಠ್, ಜಿಲ್ಲಾ ಘಟಕದ ಉಪಾಧ್ಯಕ್ಷರುಗಳಾದ ಆರ್.ಎಸ್.ವೀರಪ್ಪದೇವರು, ಬಿ.ವಿ.ದ್ವಾರಕಾನಾಥ್, ಕುಮಾರ್ ಹಾಗೂ ಕಾರ್ಯದರ್ಶಿ ಚಿಕ್ಕಹನುಮಂತಪ್ಪ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಸಲಹೆ-ಸೂಚನೆಗಳನ್ನು ಹಂಚಿಕೊಂಡರು.
– ಕೆ.ಬಿ.ಚಂದ್ರಚೂಡ
