ತುಮಕೂರು: ಮಹಾನಗರಪಾಲಿಕೆಯ 2026-27ನೇ ಸಾಲಿನ ಆಯವ್ಯಯ ತಯಾರಿಸಲು ಸಲಹೆ ಸೂಚನೆ ನೀಡಲು ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಸಂಘ, ನರ್ಸಿಂಗ್ ಹೊಮ್ಸ್ ಸಂಘಗಳ ಪದಾಧಿಕಾರಿಗಳು, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ಸಾರ್ವಜನಿಕರ ಸಭೆಯನ್ನು ದಿನಾಂಕ 20.01.2026 ರಂದು ಅಪರಾಹ್ನ 11.30 ಗಂಟೆಗೆ ತುಮಕೂರು ಮಹಾನಗರಪಾಲಿಕೆ ಕಚೇರಿಯ ಹೊಸ ಸಭಾಂಗಣದಲ್ಲಿ ಏರ್ಪಡಿಸಲಾಗಿರುತ್ತದೆ.

ಆದ್ದರಿಂದ ನಿಗದಿಪಡಿಸಿದ ದಿನಾಂಕ ಮತ್ತು ಸಮಯಕ್ಕೆ ಹಾಜರಾಗಿ ತಮ್ಮ ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿ, ಉದ್ದೇಶಿಸಿರುವ ಆಯ-ವ್ಯಯವನ್ನು ಪ್ರಗತಿಶೀಲವಾಗಿ ರೂಪಿಸಲು ಸಹಕಾರ ನೀಡಬೇಕೆಂದು ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರು ಮನವಿ ಮಾಡಿದ್ದಾರೆ.
– ಚಂದ್ರಚೂಡ ಕೆ.ಬಿ
