ತುಮಕೂರು: ಪಾವಗಡದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ತುಮಕೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಶ್ರೀ ಸಿದ್ದಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ವಿಜೇತ ಕ್ರೀಡಾಪಟುಗಳನ್ನು ಪ್ರಾಂಶುಪಾಲ ಡಾ.ಟಿ.ಬಿ.ನಿಜಲಿಂಗಪ್ಪ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನವ್ಯ ಎಸ್ ಮೂರ್ತಿ, ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾದ ಶ್ರೀವಲ್ಲಿ ಕೆಎಲ್, ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮುಜಿದ ಅಮೂಲ್ಯ ಟಿ.ಎಸ್, ದೈಹಿಕ ಶಿಕ್ಷಣ ನಿರ್ದೇಶಕ ಉದಯ್ ಕುಮಾರ್.ಎಂ, ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಯವರು ಆಡಳಿತ ಮಂಡಳಿಯವರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದವರು ಅಭಿನಂದಿಸಿದರು.
– ಚಂದ್ರಚೂಡ ಕೆ.ವಿ
