ತುಮಕೂರು: ತುಮಕೂರು ಜಿಲ್ಲಾ ಮಟ್ಟದ ದಿಶಾ ಸಮಿತಿಗೆ ಹಿರಿಯ ಜೆಡಿಎಸ್ ಮುಖಂಡ,ಮಾಜಿ ಉಪಮಹಾಪೌರರು ಮತ್ತು ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾದ ಟಿ.ಆರ್.ನಾಗರಾಜುರವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ.ಆಶ್ವಿಜರವರು ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣನವರ ಸೂಚನೆ ಮೇರೆಗೆ ಆದೇಶ ನೀಡಿದ್ದಾರೆ.ಟಿ.ಆರ್.ನಾಗರಾಜುರವರಿಗೆ ಜೆಡಿಎಸ್ ಮತ್ತು ಬಿಜೆಪಿ ಹಿರಿಯ ಮುಖಂಡರು,ಶಾಸಕರು,ಕಾರ್ಯಕರ್ತರು,ಅಭಿಮಾನಿಗಳು,ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಶುಭಕೋರಿ ಸಂತಸ ವ್ಯಕ್ತಪಡಿಸಿದ್ದಾರೆ.
– ಕೆ.ಬಿ.ಚಂದ್ರಚೂಡ
