ತುಮಕೂರು : ನಗರದಲ್ಲಿ ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕರಾಗಿ ಕಳೆದ 6 ವರ್ಷಗಳಿಂದ ಸಂಯುಕ್ತವಿಜಯ ದಿನಪತ್ರಿಕೆಯ ವಿತರಕರಾಗಿರುವ ಟಿ.ಆರ್.ನಾಗರಾಜುರವರಿಗೆ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಗೃಹಸಚಿವ ಡಾ||ಜಿ.ಪರಮೇಶ್ವರ್ ರವರು ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಯುಕ್ತ ವಿಜಯ ದಿನಪತ್ರಿಕೆಯ ಜಿಲ್ಲಾ ವರದಿಗಾರ ಕೆ.ಬಿ.ಚಂದ್ರಚೂಡ,ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಚಿ.ನಿ.ಪುರುಷೋತ್ತಮ್,ಶಾಸಕ ಜಿ.ಬಿ.ಜ್ಯೋತಿಗಣೇಶ್,ಬಿ.ಸುರೇಶ್ ಗೌಡ,ಜಿಲ್ಲಾಧಿಕಾರಿ ಶ್ರೀಮತಿ ಶುಭಕಲ್ಯಾಣ್,ಜಿ.ಪಂ.ಸಿಇಓ ಜಿ.ಪ್ರಭು,ಪೋಲೀಸ್ ವರಿಷ್ಠಾಧಿಕಾರಿ ಕೆ.ಅಶೋಕ್,ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜ,ತಹಸೀಲ್ದಾರ್ ಪಿ.ಎಸ್.ರಾಜೇಶ್ವರಿ ಮುಂತಾದವರು ಶುಭಹಾರೈಸಿದರು.
ವರದಿ : ಕೆ ಬಿ ಚಂದ್ರಚೂಡ್
