ಬೆಂಗಳೂರು, : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಯುಜಿಸಿಇಟಿ-2026 (KCET-2026) ಪರೀಕ್ಷೆಯ ಫಲಿತಾಂಶವನ್ನು ಜೂನ್ 6 ರಂದು ಪ್ರಕಟಿಸಲಾಗುತ್ತಿದೆ.
ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಕೆಇಎ ಅಧ್ಯಕ್ಷ Sharan Prakash Patil ಅವರು ಶನಿವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್ಲೈನ್ನಲ್ಲಿ ವೀಕ್ಷಿಸಬಹುದು ಎಂದು ಕೆಇಎ ತಿಳಿಸಿದೆ.
ಈ ವರ್ಷ ಸುಮಾರು 3.3 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಫಲಿತಾಂಶ ಪ್ರಕಟದೊಂದಿಗೆ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.
ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು:
https://keaonline.karnataka.gov.in/ugcet_2026_results/
