ಬೆಂಗಳೂರು: ಅರಕಲಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಬೇಕಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ತುರ್ತಾಗಿ ಅನುಮೋದನೆ ನೀಡುವಂತೆ ಮಾಜಿ ಸಚಿವರು ಹಾಗೂ ಶಾಸಕರಾದ ಎ. ಮಂಜಣ್ಣ ಅವರು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ನಗರದ ಕೆಪಿಟಿಸಿಎಲ್ (KPTCL) ಮುಖ್ಯ ಕಚೇರಿ ಇಂಧನ ಭವನದಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದ ವಿದ್ಯುತ್ ಸಂಪರ್ಕ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಯೋಜನೆಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಕ್ಷೇತ್ರದ ಜನತೆಗೆ ಅನುಕೂಲವಾಗುವಂತೆ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಂಜಣ್ಣ ಅವರು ಮನವಿ ಮಾಡಿದರು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವ್ಯವಸ್ಥಾಪಕ ನಿರ್ದೇಶಕರು ಅಗತ್ಯ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ತಕ್ಷಣವೇ ಅವಶ್ಯಕ ಕಾಮಗಾರಿಗಳಿಗೆ ತುರ್ತಾಗಿ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು. ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಹ ಸಭೆಯಲ್ಲಿ ಚರ್ಚೆ ನಡೆಯಿತು.
ವರದಿ- ಕುಮಾರಸ್ವಾಮಿ
