ಕೆ.ಆರ್.ಪೇಟೆ: ಪಟ್ಟಣದ ತಾಲ್ಲೂಕು ಕಚೇರಿಯ ವಿ.ಸಿ.ಸಭಾಂಗಣದಲ್ಲಿ ಇದೇ ಅ.07ರಂದು ನಡೆಯುವ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯು ಶಾಸಕರಾದ ಹೆಚ್.ಟಿ.ಮಂಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶಾಸಕರಾದ ಹೆಚ್.ಟಿ.ಮಂಜು ಮಾತನಾಡಿ ಬೇಡನಾಗಿದ್ದ ವಾಲ್ಮೀಕಿ ಮಹರ್ಷಿಗಳು ಸಂಸ್ಕೃತ ಭಾಷೆಯಲ್ಲಿ 24ಸಾವಿರ ಶ್ಲೋಕಗಳನ್ನು ಒಳಗೊಂಡ ರಾಮಾಯಣ ಬರೆದ ಮೊದಲ ಆದಿ ಕವಿಯಾಗಿದ್ದಾರೆ. ಹಾಗಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ವರ್ಗದವರು ಬಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು. ಯಾವುದೇ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರು ಹಾಜರಾಗಬಾರದು. ಇದೇ ರೀತಿ ಎಲ್ಲಾ ಮಹನೀಯಯ ಜಯಂತಿಗೆ ಎಲ್ಲಾ ಇಲಾಖೆಯ ಅಧಿಕಾರಿಗಳ ಹಾಜರಿ ಕಡ್ಡಾಯವಾಗಿ ಇರಬೇಕು ಕಾಟಾಚಾರದ ಜಯಂತಿಗಳಾಗಬಾರದು. ಮಹನೀಯಯ ಆದರ್ಶಗಳನ್ನು ತಿಳಿದುಕೊಂಡು ಅವರಂತೆ ಉತ್ತಮ ಜೀವನ ನಡೆಸಿ ಒಳ್ಳೆಯ ಹೆಸರು ಪಡೆದುಕೊಳ್ಳಬೇಕು.

ಮಹನೀಯರು ಸಮಾಜಕ್ಕೆ ನಿಸ್ವಾರ್ಥ ಸೇವೆಯನ್ನು ನೀಡಿದ ಕಾರಣ ಅವರು ನೂರಾರು ವರ್ಷಗಳ ಹಿಂದೆ, ಸಾವಿರಾರು ವರ್ಷಗಳ ಹಿಂದೆ ಬದುಕಿದ್ದರೂ ಕೂಡ ಅವರ ಸಾಮಾಜಿಕ ಕಳಕಳಿಯಿಂದಾಗಿ ಇಂದಿಗೂ ಅವರನ್ನು ಸ್ಮರಿಸುತ್ತೇವೆ ಹಾಗಾಗಿ ನಾವುಗಳು ಸಹ ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಂಡರೆ ಮುಂದಿನ ತಲೆಮಾರಿನ ಜನ ಇಂತಹ ಉತ್ತಮ ಅಧಿಕಾರಿ ಇದ್ದರು, ಉತ್ತಮ ರಾಜಕಾರಣಿ ಇದ್ದರು ಎಂದು ನಮ್ಮನ್ನು ಸ್ಮರಿಸಿಕೊಳ್ಳುತ್ತಾರೆ ಇಂತಹ ಸಮಾಜಮುಖಿ ಕೆಲಸಗಳನ್ನು ಮಾಡಿ ಒಳ್ಳೆಯ ಹೆಸರು ಪಡೆಯಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಶಾಸಕ ಹೆಚ್.ಟಿ.ಮಂಜು ಸಲಹೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಕೆ.ದಿವಾಕರ್, ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಪುರಸಭಾ ಸದಸ್ಯರಾದ ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ಪಶುವೈದ್ಯಾಧಿಕಾರಿ ಡಾ.ಹೆಚ್.ಎಸ್.ದೇವರಾಜು, ತಾಲ್ಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕ ಸಿದ್ದಯ್ಯ, ತೋಟಗಾರಿಕಾ ಸಹಾಯಕ ನಿರ್ದೇಶಕ ಡಾ.ಲೋಕೇಶ್, ಸಹಾಯಕ ತೋಟಗಾರಿಕೆ ಅಧಿಕಾರಿ ಡಾ.ಆರ್.ಜಯರಾಂ, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಾಂತವ್ವ.ಎಸ್.ಹಾವಣ್ಣನವರ್, ಮುಖಂಡರಾದ ಅಗ್ರಹಾರಬಾಚಹಳ್ಳಿ ಜಗದೀಶ್, ಜಿ.ಪಿ.ರಾಜು, ಗ್ಯಾಸ್ ತಮ್ಮಯ್ಯ, ಮತ್ತಿತರರು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.
-ಶ್ರೀನಿವಾಸ ಆರ್.

[…] […]