ಹಾಸನ: ಭೂ ಪರಿಹಾರ ನೀಡದ ಹಿನ್ನೆಲೆ , ಹಾಸನ ಹಿರಿಯ ಸಿವಿಲ್ ನ್ಯಾಯಾಧೀಶರ ಆದೇಶದಂತೆ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡಲಾಗಿದೆ.
ಯಗಚಿ ನಾಲೆ ನಿರ್ಮಾಣಕ್ಕಾಗಿ ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರಿಗೆ ಇದುವರೆಗೂ ಸರಿಯಾದ ಪರಿಹಾರ ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಗುಂಟೆಗೆ ₹40 ಸಾವಿರದಂತೆ 10.5 ಗುಂಟೆ ಭೂಮಿಗೆ ಒಟ್ಟು ₹11 ಲಕ್ಷ 22 ಸಾವಿರ ಪರಿಹಾರ ಮೊತ್ತ ಬಾಕಿ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪರಿಹಾರ ನೀಡುವಂತೆ ಎರಡು ವರ್ಷಗಳ ಹಿಂದೆಯೇ ನ್ಯಾಯಾಲಯ ಆದೇಶಿಸಿದ್ದರೂ, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಆದೇಶ ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಲಯ ಕಠಿಣ ಕ್ರಮಕ್ಕೆ ಮುಂದಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರ ಆದೇಶದಂತೆ ಕೋರ್ಟ್ ಅಧಿಕಾರಿಗಳು ಹಾಗೂ ವಕೀಲರು ಜಿಲ್ಲಾಧಿಕಾರಿಗಳ ಕಾರು ಜಪ್ತಿಗೆ ಆಗಮಿಸಿದ ವೇಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಪರಿಹಾರ ಹಣ ನೀಡಿಲ್ಲ ಎಂಬ ಕಾರಣದಿಂದ ನಾಗಮ್ಮ, ಲಕ್ಷ್ಮೇಗೌಡ ಮತ್ತು ಜಗದೀಶ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಜಪ್ತಿ ಪ್ರಕ್ರಿಯೆ ವೇಳೆ ದೂರುದಾರರು ಜಿಲ್ಲಾಧಿಕಾರಿಗಳ ಕಾರಿನ ಮುಂದೆ ಕುಳಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವುದು ಗಂಭೀರ ವಿಷಯವಾಗಿದ್ದು, ಪರಿಹಾರ ಹಣವನ್ನು ತಕ್ಷಣವೇ ಪಾವತಿಸಬೇಕು ಎಂದು ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ.
ಈ ಘಟನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ನೀಡದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಗುಂಟೆಗೆ ₹40 ಸಾವಿರದಂತೆ 10.5 ಗುಂಟೆ ಭೂಮಿಗೆ ಒಟ್ಟು ₹11 ಲಕ್ಷ 22 ಸಾವಿರ ಪರಿಹಾರ ಮೊತ್ತ ಬಾಕಿ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪರಿಹಾರ ನೀಡುವಂತೆ ಎರಡು ವರ್ಷಗಳ ಹಿಂದೆಯೇ ನ್ಯಾಯಾಲಯ ಆದೇಶಿಸಿದ್ದರೂ, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಆದೇಶ ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಲಯ ಕಠಿಣ ಕ್ರಮಕ್ಕೆ ಮುಂದಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರ ಆದೇಶದಂತೆ ಕೋರ್ಟ್ ಅಧಿಕಾರಿಗಳು ಹಾಗೂ ವಕೀಲರು ಜಿಲ್ಲಾಧಿಕಾರಿಗಳ ಕಾರು ಜಪ್ತಿಗೆ ಆಗಮಿಸಿದ ವೇಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಪರಿಹಾರ ಹಣ ನೀಡಿಲ್ಲ ಎಂಬ ಕಾರಣದಿಂದ ನಾಗಮ್ಮ, ಲಕ್ಷ್ಮೇಗೌಡ ಮತ್ತು ಜಗದೀಶ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಜಪ್ತಿ ಪ್ರಕ್ರಿಯೆ ವೇಳೆ ದೂರುದಾರರು ಜಿಲ್ಲಾಧಿಕಾರಿಗಳ ಕಾರಿನ ಮುಂದೆ ಕುಳಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವುದು ಗಂಭೀರ ವಿಷಯವಾಗಿದ್ದು, ಪರಿಹಾರ ಹಣವನ್ನು ತಕ್ಷಣವೇ ಪಾವತಿಸಬೇಕು ಎಂದು ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ. ಈ ಘಟನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

[…] […]