
ಹಾಸನ: ಬೇಲೂರು ತಾಲ್ಲೂಕು ಬೊಮ್ಮೆನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ.
ಗ್ರಾಮದ ಸುಶೀಲಮ್ಮ (47) ಮೃತರು. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.
ಸೊಂಡಿಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಮಲೆನಾಡು ಭಾಗದಲ್ಲಿ ನಿಲ್ಲದ ಮಾನವ ಪ್ರಾಣಿ ಸಂಘರ್ಷದಲ್ಲಿ, ಎರಡು ತಿಂಗಳ ಅಂತರದಲ್ಲಿ ಕಾಡಾನೆ ದಾಳಿಯಿಂದ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಕಾಡಾನೆಯನ್ನು ಸ್ಥಳಾಂತರಿಸದೆ ಅಥವಾ ಪರ್ಯಾಯ ವ್ಯವಸ್ಥೆ ಕೈಗೊಳ್ಳದೇ, ಪದೇ ಪದೇ ಮನುಷ್ಯರಾ ಮಾರಣಹೋಮ ನಡೆಯುತ್ತಿರುವುದು ನಿಜಕ್ಕೂ ಶೋಚನೀಯ.