ಹಾಸನ: ಜಿಲ್ಲಾ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಮಾರ್ಚ್ 7, 2026 (ಶನಿವಾರ)ರಂದು ಹಾಸನ್ನಲ್ಲಿ ಭಾರಿ ಪ್ರಮಾಣದ “ಯುವ ಉದ್ಯೋಗ ಮೇಳ” ಆಯೋಜಿಸಲಾಗಿದೆ.
Karnataka Skill Development Corporation (ಕೆಎಸ್ಡಿಸಿ), Department of Skill Development Entrepreneurship and Livelihood, ಹಾಸನ್ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ Government Engineering College Hassan ಆವರಣದಲ್ಲಿ ಈ ಉದ್ಯೋಗ ಮೇಳ ನಡೆಯಲಿದೆ.
ಮೇಳವು ಬೆಳಿಗ್ಗೆ 9.30ರಿಂದ ಸಂಜೆ 5.00ರವರೆಗೆ ನಡೆಯಲಿದ್ದು, ಸುಮಾರು 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. 10,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ಉದ್ಯೋಗಾರ್ಥಿಗಳು ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದಾಗಿದ್ದು, ಅಭ್ಯರ್ಥಿಗಳಿಗಾಗಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದೇ ವೇಳೆ ಎಚ್ಆರ್ ಪ್ರತಿನಿಧಿಗಳಿಗಾಗಿ ಪ್ರತ್ಯೇಕ ನೋಂದಣಿ ವ್ಯವಸ್ಥೆಯೂ ಇರಲಿದೆ.
ಕಾರ್ಯಕ್ರಮವು ಹಾಸನ್ ನಗರದ ಡೈರಿ ಸರ್ಕಲ್ ಸಮೀಪದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9844792015 / 63603 21766 ಸಂಖ್ಯೆಗಳನ್ನ ಸಂಪರ್ಕಿಸಬಹುದಾಗಿದೆ.
ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.