ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’ ಧಾರಾವಾಹಿಗಳು, ರಿಯಾಲಿಟಿ ಶೋಗಳು, ಗೆಮ್ ಶೋಗಳಿಂದ ವೀಕ್ಷಕರ ಮನ ಗೆದ್ದು ನಂಬರ್ 1 ಸ್ಥಾನದಲ್ಲಿ ಇರುವ ಮನರಂಜನೆಯ ಮಹಾತಾಣ ಜೀ಼ ಕನ್ನಡ. ಡ್ರಾಮಾ ಜೂನಿಯರ್ಸ್, ಸರಿಗಮಪ, ವೀಕೆಂಡ್ ವಿತ್ ರಮೇಶ್, ಕಾಮಿಡಿ ಕಿಲಾಡಿಗಳು, ಡಾನ್ಸ್ ಕರ್ನಾಟಕ ಡಾನ್ಸ್, ಜೋಡಿ ನಂಬರ್ 1, ಮತ್ತು ಸೂಪರ್ ಕ್ವೀನ್ ಅಂತಹ ಅನೇಕ ಜನಮೆಚ್ಚಿದ ರಿಯಾಲಿಟಿ ಶೋಗಳನ್ನು ಜನರ ಮುಂದಿಟ್ಟು ಅದರಲ್ಲಿ ಯಶಸ್ವೀ ಆಗಿರುವ ಜೀ಼ ಕನ್ನಡ ಈಗ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ಹೊಚ್ಚ ಹೊಸ ರಿಯಾಲಿಟಿ ಶೋ ನಾವು ನಮ್ಮವರು ಇದೇ ಆಗಸ್ಟ್ 2 ರಿಂದ ರಾತ್ರಿ 9 ಗಂಟೆಗೆ ನಿಮ್ಮನ್ನು ಮನರಂಜಿಸಲಿದೆ.
ಕನ್ನಡ ಕಿರುತೆರೆ ಇತಿಹಾಸದಲ್ಲಿಯೇ ಇದು ವಿಭಿನ್ನ ಪ್ರಯತ್ನವಾಗಿದ್ದು ನಿಮ್ಮ ನೆಚ್ಚಿನ ತಾರೆಯರು ಅವರ ಕುಟುಂಬದವರ ಜೊತೆಗೆ ಹೇಗೆ ಇರುತ್ತಾರೆ ಎಂಬುದನ್ನು ನಿಮ್ಮ ತನಕ ತಲುಪಿಸುವುದೇ ಈ ರಿಯಾಲಿಟಿ ಶೋದ ಮುಖ್ಯ ಉದ್ದೇಶ. ಈ ರಿಯಾಲಿಟಿ ಶೋನಲ್ಲಿ ಸಕ್ಕತ್ ಟ್ವಿಸ್ಟ್ ಜೊತೆಗೆ ಫನ್ ಇರಲಿದ್ದು ನಿಮಗೆ 100% ಮನರಂಜನೆ ಸಿಗೋದಂತೂ ಗ್ಯಾರಂಟಿ. ಅಷ್ಟೇ ಅಲ್ಲದೇ ಪ್ರತಿವಾರ ವಿಭಿನ್ನ ಬಗೆಯ ರೌಂಡ್ಸ್ ಇರಲಿದ್ದು ಯಾರು ಹೇಗೆ ಪರ್ಫಾಮ್ ಮಾಡ್ತಾರೆ ಎನ್ನುವುದಕ್ಕೆ ಮುಂದಿನ ದಿನಗಳಲ್ಲಿ ಉತ್ತರಸಿಗಲಿದೆ.

ತರ್ಲೆಮಾತು, ವಿಭಿನ್ನ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದ ನಿರಂಜನ್ ದೇಶಪಾಂಡೆ ಅವರು ನಾವು ನಮ್ಮವರು ರಿಯಾಲಿಟಿ ಶೋ ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತು ಕೊಂಡರೆ ಗೋಲ್ಡನ್ ಕ್ವೀನ್ ಅಮೂಲ್ಯ, ಎವರ್ಗ್ರೀನ್ ಚೆಲುವೆ ಮತ್ತು ಪೊಲಿಟಿಷಿಯನ್ ತಾರಾಅನುರಾಧ, ಎಲ್ಲರ ನೆಚ್ಚಿನ ನಟ ಶರಣ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಕರುನಾಡು ಮೆಚ್ಚಿದ ಸೆಲೆಬ್ರಿಟಿಗಳಾದ ರಜತ್-ಅಕ್ಷತಾ,ಸುಜಯ್-ಸಿಂಚನ,ಪ್ರಿಯಕೆಸರೆ-ಶಿವರಾಂ, ಅಲ್ಲುರಘು-ಸುಶ್ಮಿತಾ,
ಮಲ್ಲಯ್ಯ-ನೀಲಮ್ಮ, ಮೋಹನ್ ಕುಮಾರ್ -ಪಲ್ಲವಿ, ವಿಶಾಲ್ ಹೆಗ್ಡೆ-ಪ್ರಿಯ, ಶಿಲ್ಪ-ಶೈಲೇಶ್, ಸಮೀರ್ ಆಚಾರ್ಯ-ಶ್ರಾವಣಿ ತಮ್ಮ ಕುಟುಂಬದವರೊಡನೆ ಸೇರಿ ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಲಿದ್ದಾರೆ..
ಸಂಬಂಧ, ಒಗ್ಗಟ್ಟಿಗೆ ಬೆಲೆ ಕೊಡುವ ಕೊಡುವ ವಿಭಿನ್ನ ಕಾನ್ಸೆಪ್ಟ್ ಇರುವ ಹೊಚ್ಚ ಹೊಸ ರಿಯಾಲಿಟಿ ಶೋ ‘ನಾವುನಮ್ಮವರು’! ಇಲ್ಲಿ ಸ್ಪರ್ಧಿಗಳು ಅನೇಕ ಟ್ವಿಸ್ಟ್ಸ್ ಇರುವ ಬೇರೆ ಬೇರೆ ಟಾಸ್ಕ್ಸ್ಗಳಲ್ಲಿ ತಮ್ಮ ಕುಟುಂಬದವರ ಜೊತೆ ಸೇರಿ ಭಾಗವಹಿಸಲಿದ್ದಾರೆ. ಸಂಬಂಧಗಳನ್ನು ಸಂಭ್ರಮಿಸೋ ‘ನಾವುನಮ್ಮವರು’ ರಿಯಾಲಿಟಿ ಶೋ ಕುಟುಂಬದ ಹಳೆಯ ನೆನಪುಗಳನ್ನು ಸೆಲೆಬ್ರಿಟಿ ಸ್ಪರ್ಧಿಗಳ ಮೂಲಕ ವೀಕ್ಷಕರ ಮುಂದಿಡುವ ಕನ್ನಡಿ!
ಸಂಬಂಧಗಳ ಬೇರನ್ನು ಗಟ್ಟಿ ಮಾಡುವ ಹೊಸ ರಿಯಾಲಿಟಿ ಶೋ ‘ನಾವುನಮ್ಮವರು’ ಇದೇ ಆಗಸ್ಟ್ 2 ರಿಂದರಾತ್ರಿ 9 ಗಂಟೆಗೆ ನಿಮ್ಮ ಜೀ಼ ಕನ್ನಡದಲ್ಲಿ!
-ಶ್ರೀ ಸಾಯಿ ಎಸ್ ಮಂಜು
